ನವದೆಹಲಿ : ಲಂಡನ್ನಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆ ಇಂದು ಸಂಸತ್ ಅಧಿವೇಶನವನ್ನು ಬಲಿ ತೆಗೆದುಕೊಂಡಿದೆ. ಎರಡನೇ ಅವಧಿಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸದನ ಆರಂಭವಾಗುತ್ತಿದ್ದಂತೆ ಗದ್ದಲಕ್ಕೆ ವೇದಿಕೆಯಾಯಿತು.
ರಾಹುಲ್ ಗಾಂಧಿ ಲಂಡನ್ನಲ್ಲಿ ನೀಡಿದ ಹೇಳಿಕೆಯನ್ನು ಪ್ರಸ್ತಾಪಿಸಿದ ಬಿಜೆಪಿ ನಾಯಕರು, ರಾಹುಲ್ ಗಾಂಧಿ ದೇಶದ ಜನರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಪಿಯೂಷ್ ಗೋಯಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿಗೆ ತಿರುಗೇಟು ನೀಡುವ ಪ್ರಯತ್ನ ಮಾಡಿದ ಕಾಂಗ್ರೆಸ್ ನಾಯಕರು, ಅದಾನಿ ಕಂಪನಿಗಳ ಕುರಿತು ನೀಡಿದ ಹಿಂಡನ್ ಬರ್ಗ್ ಆಧರಿಸಿ ಜಂಟಿ ಸದನ ಸಮಿತಿ ರಚಿಸಬೇಕು. ಗ್ಯಾಸ್ ಸೇರಿದಂತೆ ಅಗತ್ಯ ಬೆಲೆಗಳ ಏರಿಕೆ ಹಾಗೂ ವಿಪಕ್ಷ ನಾಯಕರ ಮೇಲೆ ತನಿಖಾ ಸಂಸ್ಥೆಗಳ ದಾಳಿಯ ಬಗ್ಗೆ ಚರ್ಚೆ ನಡೆಯಬೇಕು ಎಂದು ಆಗ್ರಹಿಸಿದರು.