ಮೋದಿ ಸರ್ಕಾರದಲ್ಲಿ ಚೀನಾ ವಿರುದ್ಧ ಮಾತನಾಡಲು ಅವಕಾಶವೇ ಇಲ್ಲ : ಮಲ್ಲಿಕಾರ್ಜುನ ಖರ್ಗೆ
ಈ ಕುರಿತು ಚರ್ಚೆ ನಡೆಸಬೇಕು ಎನ್ನುವ ವಿಪಕ್ಷಗಳ ಬೇಡಿಕೆಗೆ ಸಂಸತ್ತಿನಲ್ಲಿ ಉಂಟಾದ ಘರ್ಷಣೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಖರ್ಗೆ ಅವರು, `ಮೋದಿ ಸರ್ಕಾರದ ಕೆಂಗಣ್ಣು ಚೀನಾ ಕನ್ನಡಕದಿಂದ ಮುಚ್ಚಲ್ಪಟ್ಟಿದಂತೆ ತೋರುತ್ತದೆ.
ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ವಿರೋಧ ಪಕ್ಷಗಳು ಗಡಿಯಲ್ಲಿ ಚೀನಾದ ನಡೆಗೆ ಪ್ರತಿಯಾಗಿ ಆಕ್ರಮಣಕಾರಿ ನೀತಿಯನ್ನು ಅನುಸರಿಸಲು ಯೋಜಿಸಿವೆ.