ಭಾರತ್ ಗೌರವ್ ಕಾಶಿ ದರ್ಶನ ಯಾತ್ರೆಯ ಮೂರನೇ ಟ್ರಿಪ್

ಶುಕ್ರವಾರ, 10 ಫೆಬ್ರವರಿ 2023 (10:52 IST)
ಬೆಂಗಳೂರು : ಉತ್ತರ ಭಾರತದಲ್ಲಿ ತೀವ್ರ ಚಳಿಯ ಕಾರಣದಿಂದ ಮುಂದೂಡಲಾಗಿದ್ದ ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲು ಪ್ರವಾಸದ ಮೂರನೇ ಟ್ರಿಪ್ ಫೆ. 21ರಂದು ಪ್ರಾರಂಭವಾಗಲಿದೆ.
 
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾಶಿ ದರ್ಶನ ರೈಲು ಪ್ಯಾಕೇಜ್ ಟೂರ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು. ಆ ನಂತರ ನಡೆದಂತಹ 2ನೇ ಟ್ರಿಪ್ ರೈಲು ಪ್ರವಾಸ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಐಆರ್ಸಿಟಿಸಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು ಊಟ, ಉಪಾಹಾರ, ಯಾತ್ರಾ ಸ್ಥಳದಲ್ಲಿ ತಂಗುವ ವ್ಯವಸ್ಥೆ ಹಾಗೂ ಯಾತ್ರಾ ಸ್ಥಳಗಳಿಗೆ ಪ್ರಯಾಣಿಸಲು ಸ್ಥಳೀಯ ಸಾರಿಗೆ ವ್ಯವಸ್ಥೆ ಹಾಗೂ ತುರ್ತು ವೈದ್ಯಕೀಯ ಸೇವೆ ವ್ಯವಸ್ಥೆಗಳನ್ನು ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ