ನನ್ನನ್ನು ಜೈಲಿಗೆ ಕಳಿಸುವ ತಿರುಕನ ಕನಸು ನನಸಾಗದು: ಕುಮಾರಸ್ವಾಮಿ
ನಾನು ಪೊಲೀಸ್ ಅಧಿಕಾರಿಯ ಉದ್ಧಟತನವನ್ನು ಖಂಡಿಸಿ, ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಅವರಿಗೆ ಬೆಂಗಳೂರಿನ ಭೂ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜತೆ ಅವರ ನೇರ ನಂಟಿದೆ. ಸಮಾಜ ವಿದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ? ಕ್ರಿಮಿನಲ್ ಪ್ರಕರಣದಲ್ಲಿ ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.