ವಿಪತ್ತಿನಲ್ಲಿ ಸಿಲುಕಿರುವವರ ರಕ್ಷಣೆಗೆ ಐಐಟಿ-ಮದ್ರಾಸ್ ವಿದ್ಯಾರ್ಥಿಗಳು ತಯಾರಿಸಿದ್ದಾರೆ ಈ ಡ್ರೋಣ್

ಶನಿವಾರ, 12 ಅಕ್ಟೋಬರ್ 2019 (08:25 IST)
ಮದ್ರಾಸ್ : ವಿಪತ್ತು ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅತ್ಯಾಧುನಿಕ ಡ್ರೋಣ್ ನ್ನು ಐಐಟಿ-ಮದ್ರಾಸ್ ವಿದ್ಯಾರ್ಥಿಗಳು ತಯಾರಿಸಿದ್ದಾರೆ.



ಇದು ವಿಪತ್ತು ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರನ್ನು ಗುರುತಿಸುವ ಹಾಗೂ ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನೂ ಪತ್ತೆ ಮಾಡುವ ಸಾಮರ್ಥ್ಯ ಹೊಂದಿದೆ. ಮತ್ತು ಅಲ್ಲದೇ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಣಾಮಕಾರಿ ವೈಮಾನಿಕ ಸಮೀಕ್ಷೆ, ಆಹಾರ, ನೀರು ಪೂರೈಕೆ, ವೈದ್ಯಕೀಯ ಸೇವೆಗಳನ್ನು ತಲುಪಿಸುವುದಕ್ಕೂ ಇದು ಸಹಕಾರಿಯಾಗಿದೆ.

 

ಕೃತಕ ಬುದ್ಧಿಮತ್ತೆ ಹಾಗೂ ಕಂಪ್ಯೂಟರ್ ವಿಷನ್ ನ್ನು ಇದಕ್ಕೆ ಅಳವಡಿಸಲಾಗಿದ್ದು, 'Eye In The Sky' ಎಂಬ ಯೋಜನೆಯ ಮೂಲಕ ಈ ಡ್ರೋಣ್ ತಯಾರಿಸಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ