ಸಂಸತ್ತಿನಲ್ಲಿ ತುಳುನಾಡ ದೈವಗಳಿಗೆ ಸಂಸದ ಬ್ರಿಜೇಶ್ ಚೌಟ ಗೌರವ ಸಲ್ಲಿಸಿದ್ದು ಹೀಗೆ

Sampriya

ಸೋಮವಾರ, 24 ಜೂನ್ 2024 (19:33 IST)
Photo Courtesy X
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ಸಂಸದರಾಗಿ ಸಂಸತ್‌ಗೆ ಪ್ರವೇಶಿಸಿದ ಬ್ರಿಜೇಶ್ ಚೌಟ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ದಕ್ಷಿಣ ಕನ್ನಡ ಲೋಕಸಭೆ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಬ್ರಿಜೇಶ್ ಅವರು ಕನ್ನಡದಲ್ಲಿ ಓದಿ, ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣವಚನ ಮಾಡಿದರು.

ನೂತನ ಸಂಸತ್‌ ಭವನ ಸೆಂಟ್ರಲ್ ವಿಸ್ಟಾದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

'ಕ್ಯಾಪ್ಟನ್ ಬ್ರಿಜೇಶ್ ಚೌಟ ಎಂಬ ಹೆಸರಿನ ನಾನು ಲೋಕಸಭೆ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ ಶ್ರದ್ಧೆಯನ್ನು ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು ಭಾರತದ ಸಾರ್ವಭೌಮತ್ವವನ್ನು  ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಕೈಂಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುತ್ತೇನೆಂದು ತುಳುನಾಡಿದ ದೈವ ದೇವರಹೆಸರಿನಲ್ಲಿ ಪ್ರಮಾಣ ವಚನ ಮಾಡುತ್ತೇನೆ. ಮಾತೆರೆಗ್ಲ ಸೊಲ್ಮೇಲು' ಎಂದು ನಮಸ್ಕರಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ