ಇದು ಯುದ್ಧದ ಸಮಯ ಅಲ್ಲ: ಜೈಶಂಕರ್
ರಷ್ಯಾದ ರಾಜಧಾನಿ ಮಾಸ್ಕೋಗೆ ತೆರಳಿದ ಜೈಶಂಕರ್ ಅವರು ಇಂದು ತಮ್ಮ ಸಹವರ್ತಿ ಸರ್ಗೆ ಲಾವ್ರೋ ಅವರನ್ನು ಭೇಟಿಯಾಗಿದ್ದಾರೆ.
ಈ ವೇಳೆ ಮಾತನಾಡಿದ ಜೈಶಂಕರ್, ಅಂತಾರಾಷ್ಟ್ರೀಯ ಪರಿಸ್ಥಿತಿಗೆ ಸಂಬಂಧಿಸಿದಂತೆ, ಕಳೆದ ಕೆಲವು ವರ್ಷಗಳಿಂದ ಕೋವಿಡ್ ಸಾಂಕ್ರಾಮಿಕ, ಹಣಕಾಸಿನ ಒತ್ತಡಗಳು ಮತ್ತು ವ್ಯಾಪಾರದ ತೊಂದರೆಗಳಿಂದ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಆದರೆ ಇದೀಗ ಮತ್ತೆ ಉಕ್ರೇನ್ನೊಂದಿಗಿನ ಸಂಘರ್ಷದ ಪರಿಣಾಮವನ್ನು ನೋಡುತ್ತಿದ್ದೇವೆ ಎಂದು ಹೇಳಿದರು.