ಪ್ರಧಾನಿ ಮೋದಿ ಜಮ್ಮು ಕಾಶ್ಮೀರ ಭೇಟಿ ರದ್ದಿಗೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ

Sampriya

ಮಂಗಳವಾರ, 6 ಮೇ 2025 (15:36 IST)
Photo Credit X
ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದಲ್ಲಿ ಉಗ್ರರು ದಾಳಿ ನಡೆಸುವ ಹಿನ್ನೆಲೆ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುಪ್ತಚರ ವರದಿ ಬಂದಿದೆ. ಇದರಿಂದ ಅಲ್ಲಿನ ಭೇಟಿಯನ್ನು ಪ್ರಧಾನಿ ರದ್ದು ಮಾಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಘಟನೆಗೆ ಮೂರು ದಿನಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ತಮ್ಮ ಭೇಟಿಯನ್ನು ಮುಂದೂಡಿದ್ದಾರೆ.

ಭೇಟಿಗೆ ಮೂರು ದಿನವಿರುವಾಗ ಪ್ರಧಾನಿ ಮೋದಿಗೆ ಗುಪ್ತಚರ ವರದಿಯನ್ನು ಕಳುಹಿಸಲಾಗಿದೆ ಎಂದು ನಾನು ಪತ್ರಿಕೆಗಳಲ್ಲಿ ಓದಿದ್ದೇನೆ. ಆದ್ದರಿಂದ ಅವರು ತಮ್ಮ ಕಾಶ್ಮೀರ ಭೇಟಿಯನ್ನು ರದ್ದುಗೊಳಿಸಿದರು.
ಭಯೋತ್ಪಾದಕ ದಾಳಿಯ ಸಂಭಾವ್ಯತೆಯ ಬಗ್ಗೆ ಪ್ರಧಾನಿ ಮೋದಿಯವರು ಪಹಲ್ಗಾಮ್ ಘಟನೆಯ ಕುರಿತು ಅವರ ಕಾಶ್ಮೀರ ಭೇಟಿಯನ್ನು ರದ್ದುಗೊಳಿಸಿದರು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ