ಕರ್ನಾಟಕದಲ್ಲಿ ಆ. 30ರವರೆಗೂ ಧಾರಾಕಾರ ಮಳೆ; 16 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ
ಶನಿವಾರ, 28 ಆಗಸ್ಟ್ 2021 (09:33 IST)
Karnataka Rains Today(ಆ.28): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡುಹಾಗೂ ಉತ್ತರ ಒಳನಾಡಿನಲ್ಲಿಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ. ನಿನ್ನೆ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದೆ. ಇಂದಿನಿಂದ ಆಗಸ್ಟ್ 30ರವರೆಗೂ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಅಧಿಕ ಮಳೆಯಾಗಲಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 30ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆಯಮಾಹಿತಿ ಪ್ರಕಾರ, ರಾಜ್ಯದ ಇಂದು ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ(SIಏ) ಭಾರೀ ಮಳೆಯಾಗಲಿದೆ. ಉಳಿದಂತೆ ಉತ್ತರ ಒಳನಾಡಿನಲ್ಲೂ(ಓIಏ) ಇಂದು ಮಳೆ ಮುಂದುವರೆಯಲಿದೆ.
ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಇಂದು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಕಳೆದ 2 ವಾರಗಳಿಂದ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಳೆದ ಕೆಲ ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ನಿನ್ನೆ ಮಧ್ಯಾಹ್ನದಿಂದಲೇ ಸುರಿದ ಧಾರಾಕಾರ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೇ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಇಂದು ಮಳೆ ಸುರಿಯಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ.
ಇಂದು ಹಲವೆಡೆ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಉತ್ತರ ಒಳನಾಡಿನಲ್ಲೂ ಇಂದು ಮಳೆಯಾಗಲಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ಕಳೆದ ವರ್ಷಗಳಿಗಿಂತ ದಾಖಲೆಯ ಪ್ರಮಾಣದ ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಡಗಿನಲ್ಲಿ ದಾಖಲೆಯ ಮಳೆಯಾಗಿದೆ.