ಮಹಾರಾಷ್ಟ್ರದಲ್ಲಿ ಸಾವಿರ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಬುಧವಾರ, 8 ಏಪ್ರಿಲ್ 2020 (07:15 IST)
ಮುಂಬೈ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇದೀಗ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿದಾಟಿದೆ.

ಮಹಾರಾಷ್ಟ್ರದಲ್ಲಿ ಮಂಗಳವಾರ  ರಾತ್ರಿ 7 ಗಂಟೆಗೆ ಸೋಂಕಿತರ ಸಂಖ್ಯೆ ಒಂದು ಸಾವಿರ ಗಡಿದಾಟಿದೆ. ನಿನ್ನೆ ಒಂದೇ ದಿನದಲ್ಲಿ 150 ಜನರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,018 ಆಗಿದೆ. ಆ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದ ಮೊದಲ ರಾಜ್ಯ ಮಹಾರಾಷ್ಟ್ರ ಎಂದೆನಿಸಿಕೊಂಡಿದೆ. ನಂತರ 699 ಜನ ಸೋಂಕಿತರ ಹೊಂದಿರುವ ಮೂಲಕ ತಮಿಳುನಾಡು ಎರಡನೇ ಸ್ಥಾನದಲ್ಲಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ