ದೈಹಿಕ ಪರೀಕ್ಷೆ ವೇಳೆ ಮೂರ್ಛೆ ತಪ್ಪಿ ಮೂವರು ಕಾನ್‌ಸ್ಟೇಬಲ್ ಅಭ್ಯರ್ಥಿಗಳು ಸಾವು

Sampriya

ಶನಿವಾರ, 31 ಆಗಸ್ಟ್ 2024 (15:19 IST)
ಮೇದಿನಿನಗರ: ಜಾರ್ಖಂಡ್‌ನ ಪಲಮುದಲ್ಲಿ ಕಾನ್ಸ್‌ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆಯ ವೇಳೆ ಮೂರ್ಛೆ ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ 25 ಆಕಾಂಕ್ಷಿಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಲಮು ಜಿಲ್ಲೆಯ ಮೇದಿನಿನಗರದಲ್ಲಿರುವ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗುರುವಾರ ರಾತ್ರಿಯಿಂದ ಇಬ್ಬರು ಅಭ್ಯರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದರೆ, ಒಬ್ಬರು ರಾಂಚಿಯ RIMS ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಮಣಿಭೂಷಣ್ ಪ್ರಸಾದ್ ತಿಳಿಸಿದ್ದಾರೆ.

ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಅವರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸಾವಿನ ಹಿಂದಿನ ನಿಖರವಾದ ಕಾರಣವನ್ನು ಪರಿಶೀಲಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಮೃತರನ್ನು ಅಮರೇಶ್ ಕುಮಾರ್ (20), ಅರುಣ್ ಕುಮಾರ್ (25) ಮತ್ತು ಪ್ರದೀಪ್ ಕುಮಾರ್ (25) ಎಂದು ಗುರುತಿಸಲಾಗಿದೆ.

ಪಲಾಮು ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಓಟವನ್ನು ಒಳಗೊಂಡ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಿದ ಸುಮಾರು 100 ಅಭ್ಯರ್ಥಿಗಳು ಇಲ್ಲಿಯವರೆಗೆ ಮೂರ್ಛೆ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆ.9ರವರೆಗೆ ನೇಮಕಾತಿ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ