ಸಿಖ್‌ ಸಮುದಾಯದ ವಿರುದ್ಧದ ಹೇಳಿಕೆಗೆ ರಾಹುಲ್‌ ಗಾಂಧಿ ವಿರುದ್ಧ ಮೂರು FIR

Sampriya

ಶುಕ್ರವಾರ, 20 ಸೆಪ್ಟಂಬರ್ 2024 (16:35 IST)
ರಾಯಪುರ: ಅಮೆರಿಕ ಪ್ರವಾಸದ ವೇಳೆ ಸಿಖ್‌ ಸಮುದಾಯಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಲೋಕಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಮೂರು ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿ ನಾಯಕರು ನೀಡಿದ ದೂರಿನ ಅನ್ವಯ ರಾಹುಲ್ ಗಾಂಧಿ ವಿರುದ್ಧ ರಾಜಧಾನಿ ರಾಯಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆರ್, ಬಿಲಾಸಪುರ ಜಿಲ್ಲೆಯ ಬಿಲಾಸಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಮೂರನೇ ಪ್ರಕರಣ ದುರ್ಗ್ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ರಾಹುಲ್ ಗಾಂಧಿ ನೀಡಿದ ಹೇಳಿಕೆ ಹೀಗಿದೆ: ಭಾರತದಲ್ಲಿ ಗುರುದ್ವಾರಗಳಿಗೆ ತೆರಳುವಾಗ ಸಿಖ್ಖರು ಟರ್ಬನ್ ಧರಿಸಲು ಅವಕಾಶ ನೀಡಲಾಗುತ್ತದೆಯೇ. ಇಡೀ ಜಗತ್ತಿನಲ್ಲಿ, ಭಾರತದಲ್ಲೂ ಸಿಖ್ಖರು ಗುರುದ್ವಾರಕ್ಕೆ ತೆರಳುವಾಗ ಟರ್ಬನ್ ಧರಿಸಿರುತ್ತಾರೆ. ಅವರಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಪ್ರಧಾನಿ ಸಹ ಗುರುದ್ವಾರಕ್ಕೆ ತೆರಳುವಾಗ ಟರ್ಬನ್ ಧರಿಸುತ್ತಾರೆ.  

ಈ ಸಂಬಂಧ ಬಿಜೆಪಿ ವಕ್ತಾರ ಅಮರಜಿತ್ ಸಿಂಗ್ ಛಾಬ್ರಾ ಅವರು ರಾಹುಲ್ ಹೇಳಿಕೆಯು ಭಾರತದ ಸಿಖ್ಖರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ