'ಒಂದು ರಾಷ್ಟ್ರ ಒಂದು ಚುನಾವಣೆ' ವರದಿಗೆ ಮೂವರು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಿಂದ ಅಸಮಾಧಾನ ವ್ಯಕ್ತ

Sampriya

ಗುರುವಾರ, 14 ಮಾರ್ಚ್ 2024 (18:37 IST)
Photo Courtesy Facebook
ನವದೆಹಲಿ:  ಇಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದ ಉನ್ನತ ಮಟ್ಟದ ಸಮಿತಿ 'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಸಂಬಂಧಿಸಿದಂತೆ ಸಲ್ಲಿಸಿದ ವರದಿಯನ್ನು  ಹೈಕೋರ್ಟ್‌ನ  ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಲ್ಲಿ ಮೂವರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. 
 
ಪ್ರಮುಖ ಹೈಕೋರ್ಟ್‌ಗಳ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಲ್ಲಿ 9 ಜನ ಏಕಕಾಲದಲ್ಲಿ ನಡೆಯುವ ಚುನಾವಣೆಯನ್ನು ಬೆಂಬಲಿಸಿದ್ದಾರೆ. ಈ ಬಗ್ಗೆ ಸಕಾರಾತ್ಮಕ  ಅನುಕೂಲಗಳನ್ನು ಇವರು ಒತ್ತಿ ಹೇಳಿದ್ದು, ಇನ್ನೂ ಮೂವರು ತಮ್ಮ ಕಳಮಳವನ್ನು ವ್ಯಕ್ತಪಡಿಸಿದ್ದಾರೆ. 
 
ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ, ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗಿರೀಶ್ ಚಂದ್ರ ಗುಪ್ತಾ ಹಾಗೂ ಮದ್ರಾಸ್ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಅವರು ಏಕಕಾಲದ ಚುನಾವಣೆ ಪರಿಕಲ್ಪನೆಗೆ ವಿರೋಧ ವ್ಯಕ್ತಪಡಿಸಿದವರು. 
 
ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಅವರು ವಾದ,  ಈ ವಿಚಾರ ರಾಜ್ಯ ಮಟ್ಟದ ರಾಜಕೀಯ ಬದಲಾವಣೆ ಜೊತೆಗೆ ಪ್ರಜಾಪ್ರಭುತ್ವದ ಅಭಿವ್ಯಕ್ತಿಯನ್ನು ನಿಗ್ರಹಿಸಬಹುದು. ಹೆಚ್ಚುವರಿಯಾಗಿ, ಏಕಕಾಲದ ಚುನಾವಣೆಗಳು ರಾಜಕೀಯ ಹೊಣೆಗಾರಿಕೆಗೆ ಅಡ್ಡಿಯಾಗುತ್ತವೆ ಎಂದರು.
 
ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗಿರೀಶ ಚಂದ್ರಗುಪ್ತಾ ಅವರು ಈ ಕಲ್ಪನೆಯು ಪ್ರಜಾಪ್ರಭುತ್ವದ ತತ್ವಗಳಿಗೆ ಪೂರಕವಾಗಿಲ್ಲ ಎಂದು ವಿರೋಧಿಸಿದ್ದಾರೆ. 
 
 ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಅವರು,  ಏಕಕಾಲದಲ್ಲಿ ಚುನಾವಣೆ ಕಲ್ಪನೆ ಭಾರತದ ಒಕ್ಕೂಟ ರಚನೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಪ್ರಾದೇಶಿಕ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
 
ಕೋವಿಂದ ನೇತೃತ್ವದ ಸಮಿತಿಯು ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತನ್ನ 18,626 ಪುಟದ ವರದಿಯನ್ನು ಸಲ್ಲಿಸಿದೆ. ಮೊದಲ ಹಂತದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು. ಅದಾದ, 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.
 
ವರದಿ ಸಲ್ಲಿಸುವ ಸಂದರ್ಭ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಮಿತಿ ಸದಸ್ಯರು, ರಾಜ್ಯ ಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಮತ್ತು ಇತರರು ಹಾಜರಿದ್ದರು. 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ