ಮಹಿಳಾ ಪೊಲೀಸ್ ಕರ್ತವ್ಯದ ಸಮಯ ಕಡಿತ?

ಶನಿವಾರ, 29 ಜನವರಿ 2022 (10:58 IST)
ಮುಂಬೈ : ಮಹಾರಾಷ್ಟ್ರದ್ಯಂತ ಮಹಿಳಾ ಪೊಲೀಸ್ ಸಿಬ್ಬಂದಿ ಇನ್ಮುಂದೆ 12 ಗಂಟೆಗಳ ಬದಲಿಗೆ ಎಂಟು ಗಂಟೆಗಳ ಕಾಲ ಮಾತ್ರ ಕರ್ತವ್ಯ ನಿರ್ವಹಿಸುಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸಂಜಯ್ ಪಾಂಡೆ ಆದೇಶ ಹೊರಡಿಸಿದ್ದಾರೆ.

ಸಾಮಾನ್ಯವಾಗಿ ಪುರುಷರು ಹಾಗೂ ಮಹಿಳಾ ಸಿಬ್ಬಂದಿ 12 ಗಂಟೆಗಳ ಕಾಲ ಕಾರ್ಯನಿರ್ವಸುತ್ತಾರೆ. ಆದರೆ ಮಹಿಳಾ ಪೊಲೀಸ್ ಸಿಬ್ಬಂದಿ ಕೆಲಸವನ್ನು ಕಡಿಮೆ ಮಾಡುವ ಸಲುವಾಗಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ.

ಮುಂದಿನ ಆದೇಶದವರೆಗೂ ಮಹಿಳೆಯರು ಇನ್ಮುಂದೆ 8 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸಬಹುದು. ಯುನಿಟ್ ಕಮಾಂಡರ್ಗಳು ಆದೇಶವನ್ನು ಕಾರ್ಯಗತಗೊಳಿಸುವುದನ್ನು ಖಚಿತಪಡಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ