ತಿರುಪತಿ ಗರ್ಭಗುಡಿ 8 ತಿಂಗಳು ಬಂದ್!

ಮಂಗಳವಾರ, 27 ಡಿಸೆಂಬರ್ 2022 (08:56 IST)
ಹೈದರಾಬಾದ್ : ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿರುವ ತಿರುಮಲ ದೇವಸ್ಥಾನದ ಮುಖ್ಯ ಗರ್ಭಗುಡಿಯನ್ನು 2023ರ ಹೊಸ ವರ್ಷದಲ್ಲಿ ಕನಿಷ್ಠ 6 ರಿಂದ 8 ತಿಂಗಳು ಮುಚ್ಚುವ ಸಾಧ್ಯತೆಯಿದೆ.
 
ತಿರುಮಲದ ಮುಖ್ಯ ಗರ್ಭಗುಡಿ ಮೇಲೆ ಇರುವ ವಿಮಾನ ಆಕೃತಿಯ (ಮೂರು ಅಂತಸ್ತು) ಗೋಪುರ ಆನಂದ ನಿಲಯಕ್ಕೆ ಹೊದಿಸಲಾಗಿದ್ದ ಚಿನ್ನದ ಲೇಪನವನ್ನು ಬದಲಿಸಲು ತಿರುಮಲ ತಿರುಪತಿ ದೇವಸ್ಥಾನಂ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 

ನೂತನ ಚಿನ್ನದ ಲೇಪನ ಕಾರ್ಯ ಪೂರ್ಣಗೊಳ್ಳುವವರೆಗೆ ದೇವಸ್ಥಾನದ ಸಮೀಪ ತಾತ್ಕಾಲಿಕವಾಗಿ ವೆಂಕಟೇಶ್ವರ ವಿಗ್ರಹ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ಫೆಬ್ರವರಿಯಲ್ಲಿ ಕೆಲಸ ಆರಂಭಗೊಳ್ಳಲಿದ್ದು, ಈ ಚಿನ್ನದ ಲೇಪನದ ಕಾರ್ಯ ಪೂರ್ಣಗೊಳ್ಳಲು 6 ತಿಂಗಳು ಬೇಕಾಗಬಹುದು ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ವೈ.ವಿ.ಸುಬ್ಬ ರಾವ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ