ಇಂದು ಅರುಣ್ ಜೇಟ್ಲಿ ಅಂತ್ಯಸಂಸ್ಕಾರ;ಪ್ರಧಾನಿ ಮೋದಿ ಬರುವುದು ಅನುಮಾನ

ಭಾನುವಾರ, 25 ಆಗಸ್ಟ್ 2019 (11:28 IST)
ನವದೆಹಲಿ : ನಿಧನರಾದ ಬಿಜೆಪಿಯ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯಸಂಸ್ಕಾರ ಇಂದು ನೆರವೇರಲಿದೆ.ಅನಾರೋಗ್ಯ  ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರು, ಏಮ್ಸ್ ಆಸ್ಪತ್ರೆಗೆ ನಿನ್ನೆ ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ  ಚಿಕಿತ್ಸೆ ಫಲಕಾರಿಯಾಗದೇ  ಮೃತಪಟ್ಟಿದ್ದಾರೆ. ಇಂದು ದೆಹಲಿಯಲ್ಲಿ ಸಂಜೆ ಅರುಣ್ ಜೇಟ್ಲಿ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ನಿಯಮಗಳ ಮೂಲಕ ನಡೆಯಲಿದೆ.


ಈ ವೇಳೆ ಹಲವು ರಾಜಕೀಯ ನಾಯಕರು, ಗಣ್ಯರು ಹಾಜರಾಗಲಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್, ಯುಎಇ ಮತ್ತು ಬಹರೇನ್ ದೇಶಗಳ ಪ್ರವಾಸದಲ್ಲಿ ಇರುವ ಹಿನ್ನಲೆ ಅರುಣ್ ಜೇಟ್ಲಿ ಅವರ ಅಂತ್ಯಸಂಸ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗುವುದು ಅನುಮಾನ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ