ಇಂದು ವಂಶಾಡಳಿತದ ರಾಜಕೀಯ ಅಪಾಯದಲ್ಲಿದೆ : ಅಮಿತ್ ಶಾ

ಶನಿವಾರ, 8 ಏಪ್ರಿಲ್ 2023 (10:24 IST)
ಲಕ್ನೋ : ಇಂದು ಪ್ರಜಾಪ್ರಭುತ್ವ ಅಪಾಯದಲ್ಲಿಲ್ಲ. ಜಾತಿವಾದ ಮತ್ತು ವಂಶಾಡಳಿತದ ರಾಜಕೀಯ ಅಪಾಯದಲ್ಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಾಂಗ್ರೆಸ್ಗೆ ಕುಟುಕಿದ್ದಾರೆ.

ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ಅಪಾಯ ಎಂಬ ರಾಹುಲ್ ಗಾಂಧಿ ಟೀಕೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತಂದ ಶಾಸನದ ಆಧಾರದ ಮೇಲೆ ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಹೇಳಿದರು.

ಉತ್ತರ ಪ್ರದೇಶದ ಕೌಶಂಬಿ ಮಹೋತ್ಸವವನ್ನು ಉದ್ಘಾಟಿಸಿದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವತ್ತೂ ಸಭೆ, ಚರ್ಚೆ ಇಲ್ಲದೆ ಬಜೆಟ್ ಅಧಿವೇಶನ ಮುಗಿದಿರಲಿಲ್ಲ. ಆದರೆ ಈ ಬಾರಿ ಕಲಾಪ ನಡೆಸಲು ವಿಪಕ್ಷಗಳು ಬಿಡಲಿಲ್ಲ. ರಾಹುಲ್ ಗಾಂಧಿ ಅನರ್ಹತೆಯನ್ನು ಪ್ರಶ್ನಿಸಿ ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸಿದ ವಿರೋಧ ಪಕ್ಷಗಳನ್ನು ದೇಶ ಯಾವತ್ತೂ ಕ್ಷಮಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. 

ಎಲ್ಲಾ ವರ್ಗಗಳ ಸರ್ವತೋಮುಖ ಅಭಿವೃದ್ಧಿಗೆ 2024 ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು  ಪ್ರಧಾನಿಯನ್ನಾಗಿ ಆಯ್ಕೆ ಮಾಡುವಂತೆ ಜನರಲ್ಲಿ ಅವರು ಮನವಿ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ