ಇಂದು 74ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆ; ಪ್ರಧಾನಿ ಮೋದಿಯಿಂದ ಧ್ವಜಾರೋಹಣ

ಶನಿವಾರ, 15 ಆಗಸ್ಟ್ 2020 (08:16 IST)
ನವದೆಹಲಿ : ಇಂದು 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಪ್ರಧಾನಿ ಮೋದಿಯವರು ಇಂದು ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೇರವೇರಿಸಿದ್ದಾರೆ.

ಬಳಿಕ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಮೊದಲಿಗೆ ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸಿದ್ದಾರೆ. ಕೊರೊನಾ ಜೊತೆಗೆ ಪ್ರವಾಹ. ಸಿಡಿಲಿಗೆ ಹಲವಾರು ಜನ ಬಲಿಯಾಗಿದ್ದಾರೆ. ಇಷ್ಟೆಲ್ಲಾ ಆದ್ರೂ ಭಾರತದ ಆತ್ಮವಿಶ್ವಾಸಕ್ಕೆ ಯಾವುದೇ ಧಕ್ಕೆ ಉಂಟಾಗಿಲ್ಲ ಎಂದು ಹೇಳಿದ್ದಾರೆ.

ಹಾಗೇ ಭಾರತದಲ್ಲಿ ಎಫ್ ಡಿಐ ನಲ್ಲಿ ಹೆಚ್ಚಳವಾಗಿದೆ. ವಿಶ್ವದ ದೊಡ್ಡ ದೊಡ್ಡ ಕಂಪೆನಿಗಳು ಭಾರತದತ್ತ ಮುಖಮಾಡಿದೆ. ಮೇಕ್ ಇನ್ ಇಂಡಿಯಾ ಜತೆ ಮೇಕ್ ಫಾರ್ ವರ್ಲ್ಡ್  ಗುರಿಯನ್ನು ಸಹ ಇಟ್ಟುಕೊಳ್ಳಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ