ನಾಳೆ ಸಂಜೆ 5 ಗಂಟೆಗೆ ಉತ್ತರಪ್ರದೇಶದ ನೂತನ ಸಿಎಂ ಆಯ್ಕೆ

ಗುರುವಾರ, 16 ಮಾರ್ಚ್ 2017 (18:45 IST)
ನಾಳೆ ಸಂಜೆ ನಡೆಯಲಿರುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಶಾಸಕರು ಉತ್ತರಪ್ರದೇಶ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಉತ್ತರಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಬಹುಮತ ಪಡೆದಿದೆ. ಇದೀಗ ನೂತನ ಮುಖ್ಯಮಂತ್ರಿ ಆಯ್ಕೆಗೆ ಚಾಲನೆ ನೀಡಲಾಗಿದ್ದು, ನಾಳೆ ಅಂತಿಮವಾಗಿ ಕುತೂಹಲಕ್ಕೆ ತೆರೆ ಬೀಳಲಿದೆ.
 
ಮುಖ್ಯಮಂತ್ರಿ ರೇಸ್‌ನಲ್ಲಿ ಘಟಾನುಘಟಿಗಳು ಸ್ಥಾನ ಪಡೆದಿದ್ದಾರೆ. ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ, ಮಹೇಶ್ ಶರ್ಮಾ, ಜಲಸಂಪನ್ಮೂಲ ಖಾತೆ ಸಚಿವೆ ಉಮಾ ಭಾರತಿ ಸೇರಿದಂತೆ ಇನ್ನು ಕೆಲವರು ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ.
 
ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸೇರಿದಂತೆ ಇತರ ನಾಯಕರು ಶಾಸಕಾಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ