ED ಸಮನ್ಸ್: 3 ವಾರಗಳ ಕಾಲಾವಕಾಶ ಕೇಳಿದ ಸೋನಿಯಾ ಗಾಂಧಿ

ಬುಧವಾರ, 8 ಜೂನ್ 2022 (21:46 IST)
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಲು 3 ವಾರಗಳ ಕಾಲವಕಾಶ ನೀಡಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣದ ವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಜೂನ್ 8ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ಜಾರಿ ಮಾಡಿತ್ತು.
ಸೋನಿಯಾ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ವಾದ್ರಾಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದೀಗ ಸೋನಿಯಾ ವಿಚಾರಣೆಗೆ ಹಾಜರಾಗಲು ಕಾಲವಕಾಶ ಕೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ