ಲಕ್ನೋ : 26 ವರ್ಷದ ಗರ್ಭಿಣಿ ಮೇಲೆ ಟ್ರಕ್ ಒಂದು ಹರಿದಿದ್ದು, ಮಹಿಳೆ ಮಗುಚಿ ಬಿದ್ದು ಹೆಣ್ಣು ಮಗುವಿಗೆ ಜನ್ಮ ನೀಡಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆ ಮತ್ತು ಆಕೆಯ ಪತಿ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿಗೆ ವೇಗವಾಗಿ ಬರುತ್ತಿದ್ದ ಕಾರಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆಕೆಯ ಪತಿ ನಿಯಂತ್ರಣ ಕಳೆದುಕೊಂಡಿದ್ದಾರೆ.
ಆಗ ಕೆಳಗೆ ಬಿದ್ದ ಗರ್ಭಿಣಿ ಮೇಲೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಹರಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಮಹಿಳೆಗೆ ರಸ್ತೆಯಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸದ್ಯ ಮಗು ಆರೋಗ್ಯವಾಗಿದ್ದು, ಮಗುವಿಗೆ ಇಬ್ಬರು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಗೀತಾ ಅನೇಜಾ ಹೇಳಿದ್ದಾರೆ.