ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Sampriya

ಬುಧವಾರ, 27 ಆಗಸ್ಟ್ 2025 (10:01 IST)
Photo Credit X
ಜಮ್ಮು: ಜಮ್ಮುವಿನಲ್ಲಿ ಸುರಿದ ರಣಭೀಕರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಭೂಕುಸಿತ ಉಂಟಾಗಿ ಮನೆ, ಸೇತುವೆ ಕೊಚ್ಚಿ ಹೋದ ಘಟನೆ ಸಂಭವಿಸಿದೆ.

ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲೂ ಭೂಕುಸಿತ ಸಂಭವಿಸಿದ್ದು, 9 ಮಂದಿ ಯಾತ್ರಿಕರು ಸೇರಿದಂತೆ ಮಳೆ ಅನಾಹುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಜಮ್ಮು-ಶ್ರೀನಗರ ಮತ್ತು ಕಿಶ್ತ್ವಾರ್-ದೋಡಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ, ಭೂಕುಸಿತ, ಹಠಾತ್ ಪ್ರವಾಹದಿಂದ ರಸ್ತೆಗಳ ಸಂಚಾರದ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಅಲ್ಲದೆ, ಜಮ್ಮುವಿಗೆ ಹೋಗುವ ಮತ್ತು ಅಲ್ಲಿಂದ ಬರುವ ಅನೇಕ ರೈಲುಗಳನ್ನು ರದ್ದುಪಡಿಸಲಾಗಿದೆ.

ಅಧ್ಕ್ವರಿಯಲ್ಲಿರುವ ಇಂದರ್ಪ್ರಸ್ಥ ಭೋಜನಾಲಯದ ಬಳಿ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದವರನ್ನು ಹೊರತೆಗೆಯಲು ರಕ್ಷಣಾ ಪಡೆಗಳು ಹರಸಾಹಸ ಪಡುತ್ತಿದ್ದಾರೆ. ಹಿಮಕೋಟಿ ದೇಗುಲದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿಗೊಳಿಸಲಾಗಿದೆ. ಕತ್ರಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ