ವಿಂಗ್‌ ಕಮಾಂಡರ್‌ ಅಭಿನಂದನ್ ಗೆ ಚಿತ್ರಹಿಂಸೆ; ಜಿನೆವಾ ಒಪ್ಪಂದವನ್ನು ಉಲ್ಲಂಘಿಸಿದ ಪಾಕ್

ಗುರುವಾರ, 28 ಫೆಬ್ರವರಿ 2019 (09:51 IST)
ನವದೆಹಲಿ : ಪಾಕಿಸ್ತಾನದ ವಶದಲ್ಲಿರುವ ಭಾರತೀಯ ಸೇನೆಯ ವಿಂಗ್‌ ಕಮಾಂಡರ್‌ ಅಭಿನಂದನ್ ಗೆ ಚಿತ್ರಹಿಂಸೆ ನೀಡುವುದರ ಮೂಲಕ ಪಾಕ್ ಜಿನೆವಾ ಒಪ್ಪಂದವನ್ನು ಉಲ್ಲಂಘಿಸಿದೆ ಎಂಬುದಾಗಿ ತಿಳಿದುಬಂದಿದೆ.

ಭಾರತದ ಮೇಲೆ ದಾಳಿ ನಡೆಸಲು ಮುಂದಾದ ಶತ್ರು ಪಡೆಯನ್ನು ಹಿಮ್ಮೆಟ್ಟಿಸುವ ವೇಳೆ ಮಿಗ್‌- 21 ವಿಮಾನ ಪತನವಾದ ಬಳಿಕ ಪಾಕಿಸ್ತಾನದ ಅರಣ್ಯ ಪ್ರದೇಶದಲ್ಲಿ ಬಿದ್ದ ವಿಂಗ್‌ ಕಮಾಂಡರ್‌ ಅಭಿನಂದನ್‌ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಬಳಿಕ ಅವರನ್ನು ಸೇನಾ ಯೋಧರು ಪ್ರಾಣಿಗಳಂತೆ ಕಲ್ಲುಬಂಡೆಗಳ ಮೇಲೇ ಎಳೆದುಕೊಂಡು ಬಂದಿದ್ದಾರೆ. ಈ ವೇಳೆ ಅವರ ಮುಖವೆಲ್ಲಾ ರಕ್ತಸಿಕ್ತವಾಗಿದೆ. ಅವರ ಕಣ್ಣಿಗೆ ಬಟ್ಟೆಕಟ್ಟಿ, ಕೈಗಳನ್ನು ಹಿಂದಕ್ಕೆ ಕಟ್ಟಿವಾಹನದಲ್ಲಿ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಪಾಕಿಸ್ತಾನ ಬಿಡುಗಡೆ ಮಾಡಿತ್ತು.

 

ಭಾರತೀಯ ಸೈನಿಕನನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಕ್ಕೆ ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.ಜಿನೆವಾ ಒಪ್ಪಂದದಂತೆ ಸೈನಿಕನಿಗೆ ಗೌರವ ಕೊಡದೆ ಆತನನ್ನು ಪ್ರಾಣಿಗಳಿಗಿಂತ ಕೀಳಾಗಿ ನಡೆಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ