ಭುವನೇಶ್ವರ್ : ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೇ ಸಿಬ್ಬಂದಿಗಳನ್ನು ಸಿಬಿಐ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತರನ್ನು ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ಟೆಕ್ನಿಶಿಯಲ್ ಪಪ್ಪು ಕುಮಾರ್ ಎಂದು ಗುರುತಿಸಲಾಗಿದೆ. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 304 (ಅಪರಾಧಿಕ ಮಾನವ ಹತ್ಯೆ) ಮತ್ತು 201 (ಸಾಕ್ಷ್ಯ ನಾಶ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಂದು ತಿಂಗಳ ತನಿಖೆ ನಡೆಸಿರುವ ಸಿಬಿಐ ಬಂಧಿತರ ಮೇಲೆ ಕಠಿಣ ಸೆಕ್ಷನ್ಗಳನ್ನು ಹಾಕಿ ಬಂಧಿಸಿದೆ. ಒಡಿಶಾ ಪೊಲೀಸರು ಈ ಮೊದಲು ದಾಖಲಿಸಿದ್ದ ಎಫ್ಐಆರ್ ಇದರಲ್ಲಿ ಅನ್ವಯಿಸಿಲ್ಲ. ಮೂವರು ಆರೋಪಿಗಳು ಈ ಅಪಘಾತಕ್ಕೆ ಹೇಗೆ ಪಾತ್ರರು ಎಂಬುದನ್ನು ಅಧಿಕಾರಿಗಳು ತಿಳಿಸಿಲ್ಲ. ಆದರೆ ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.