ಎನ್‌ಕೌಂಟರ್: ಕಾಶ್ಮಿರದಲ್ಲಿ ಇಂಟರ್‌ನೆಟ್, ಮೊಬೈಲ್ ಸೇವೆ ಸ್ಥಗಿತ

ಶನಿವಾರ, 27 ಮೇ 2017 (14:34 IST)
ಉಗ್ರರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಕಮಾಂಡರ್ ಸಬ್ಜಾರ್ ಭಟ್ ಹತ್ಯೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಉದ್ರಿಕ್ತ ವಾತಾವರಣವಿರುವುದರಿಂದ   ಇಂಟರ್‌ನೆಟ್ ಮತ್ತು ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಕಾಶ್ಮಿರದ ರಾಮ್‌ಪುರ್ ಸೆಕ್ಟರ್‌ನಲ್ಲಿ ಭಾರತೀಯ ಸೇನಾ ನಡೆಸಿದ ಭಾರಿ ಕಾರ್ಯಾಚರಣೆಯಲ್ಲಿ ಒಟ್ಟು 8 ಉಗ್ರರು ಹತರಾಗಿದ್ದಾರೆ.
 
ಪಾಕಿಸ್ತಾನದಿಂದ ಗಡಿಯೊಳಗೆ ನುಸಳಲು ಉಗ್ರರು ಯತ್ನಿಸುತ್ತಿದ್ದಾಗ ಭಾರತೀಯ ಸೇನಾಪಡೆಗಳು ಮತ್ತು ಉಗ್ರರ ನಡುವೆ ನಡೆದ ಘರ್ಷಣೆಯಲ್ಲಿ ಎಂಟು ಉಗ್ರರನ್ನು ಹತ್ಯೆ ಮಾಡಲಾಗಿದೆ. 
 
ಸೇನಾಪಡೆಗಳ ನಡೆಸಿದ ಟ್ರಾಲ್ ಎನ್‌ಕೌಂಟರ್‌ನಲ್ಲಿ ಉಗ್ರ ಬುರ್ಹಾನಿ ಸಹಚರ ಹಿಜ್ಬುಲ್ ಮುಜಾಹಿದಿನ್ ಕಮಾಂಡರ್ ಸಬ್ಜಾರ್ ಭಟ್‌ನನ್ನು ಹತ್ಯೆ ಮಾಡಲಾಗಿದೆ. ಇದರೊಂದಿಗೆ ಸೇನಾ ಎನ್‌ಕೌಂಟರ್‌ನಲ್ಲಿ ಹತರಾದ ಉಗ್ರರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ ಎಂದು ಸೇನಾಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ