ಎಲ್ಲಾ ಪ್ರಕರಣಗಳು ದೆಹಲಿಗೆ ವರ್ಗಾವಣೆ : ಸುಪ್ರೀಂ

ಗುರುವಾರ, 11 ಆಗಸ್ಟ್ 2022 (12:58 IST)
ನವದೆಹಲಿ : ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ದಾಖಲಾಗಿರುವ ಎಲ್ಲಾ 10 ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಆದೇಶ ನೀಡಿದೆ.
 
ಇದರಿಂದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾಗೆ ದೊಡ್ಡ ಹೊರೆ ಇಳಿದಂತಾಗಿದೆ. ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ನೀಡಿದ್ದ ಹೇಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಬಳಿಕ ನೂಪುರ್ ವಿರುದ್ಧ ದೇಶಾದ್ಯಂತ ಪ್ರಕರಣಗಳು ದಾಖಲಾಗಿತ್ತು. ಇದೀಗ ದಾಖಲಾಗಿರುವ ಎಲ್ಲಾ 10 ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಲಾಗುವುದು, ನೂಪುರ್ ವಿರುದ್ಧದ ಪ್ರಕರಣಗಳ ತನಿಖೆಯನ್ನು ದೆಹಲಿ ಪೊಲೀಸರು ನಡೆಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಪ್ರವಾದಿ ಬಗ್ಗೆ ಶರ್ಮಾ ಅವರ ಹೇಳಿಕೆಗಳ ಮೇಲೆ ಇನ್ನೂ ಹೆಚ್ಚಿನ ಎಫ್ಐಆರ್ಗಳು ದಾಖಲಾದಲ್ಲಿ, ಅವುಗಳನ್ನು ಸ್ವಯಂಚಾಲಿತವಾಗಿ ದೆಹಲಿ ಪೊಲೀಸರಿಗೆ ವರ್ಗಾಯಿಸಲಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ