ವಿ.ಕೆ.ಶಶಿಕಲಾರನ್ನು ತುಮಕೂರು ಜೈಲಿಗೆ ವರ್ಗಾಯಿಸಲು ಕೋರಿ ಪಿಐಎಲ್

ಸೋಮವಾರ, 6 ಮಾರ್ಚ್ 2017 (18:42 IST)
ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾರನ್ನು ತುಮಕೂರಿನ ಜೈಲಿಗೆ ವರ್ಗಾಯಿಸುವಂತೆ ಆದೇಶ ನೀಡಬೇಕು ಎಂದು ಕೋರಿ ಟ್ರಾಫಿಕ್ ರಾಮಸ್ವಾಮಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದಾರೆ.
 
ಬೆಂಗಳೂರು ತಮಿಳುನಾಡಿಗೆ ಹತ್ತಿರವಾಗಿದ್ದರಿಂದ ಸಚಿವರು ಸೇರಿದಂತೆ ಬೆಂಬಲಿಗರು ಶಶಿಕಲಾರನ್ನು ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ಪ್ರತಿನಿತ್ಯ ಬರುತ್ತಿರುವುದರಿಂದ ಟ್ರಾಫಿಕ್ ಸಮಸ್ಯೆ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 
ತುಮಕೂರಿನ ಜೈಲಿನಲ್ಲಿ ಮಹಿಳೆಯರಿಗಾಗಿ ವಿಶೇಷ ಸೆಲ್ ಇರುವುದರಿಂದ ಶಶಿಕಲಾರನ್ನು ವರ್ಗಾಯಿಸುವಂತೆ ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಪಿಐಎಲ್‌ನಲ್ಲಿ ಮನವಿ ಮಾಡಲಾಗಿದೆ.
 
ವಿ.ಕೆ.ಶಶಿಕಲಾ ಅಪರಾಧಿಯಾಗಿ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸುತ್ತಿರುವುದರಿಂದ ಅವರನ್ನು ಭೇಟಿಯಾಗಲು ಸಚಿವರು ಆಗಮಿಸುತ್ತಿರುವುದು ಕಾನೂನುಬಾಹಿರವಾಗಿದೆ ಎಂದು ತಿಳಿಸಿದ್ದಾರೆ. 
 
ಶಶಿಕಲಾರನ್ನು ಭೇಟಿ ಮಾಡಿದ ನಾಲ್ವರು ಸಚಿವರ ವಿರುದ್ಧ ಕ್ರಮಕೈಗೊಳ್ಳಲು ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿದೆ.
 
ಹೈಕೋರ್ಟ್ ಮುಂದಿನ ವಾರ ಅರ್ಜಿಯ ವಿಚಾರಣೆ ನಡೆಸಲಿರುವುದರಿಂದ, ಕೋರ್ಟ್ ಯಾವ ನಿರ್ಣಯಕ್ಕೆ ಬರುತ್ತದೆ ಎನ್ನುವುದನ್ನು ಕಾದುನೋಡಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ