ಮೊದಲ ಬಾರಿಗೆ ಗ್ರಾ.ಪಂ. ಅಧ್ಯಕ್ಷರಾಗಿ ಮಂಗಳಮುಖಿ ಆಯ್ಕೆ
ಮುಂಬೈ: ಮಹಾರಾಷ್ಟ್ರದಲ್ಲಿ ಇದೇ ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಿನ್ನೆ(ಅ.17) ಮಹಾರಾಷ್ಟ್ರದ 3,666 ಗ್ರಾಮ ಪಂಚಾಯತಿಗೆ ಚುನಾವಣೆ ನಡೆದಿದ್ದು, ಮಂಗಳವಾರ ಮತ ಎಣಿಕೆ ನಡೆದಿತ್ತು. ಇದರಲ್ಲಿ ಬಿಜೆಪಿ 1,311 ಸೀಟುಗಳಲ್ಲಿ ಗೆಲುವು ದಾಖಲಿಸಿದೆ. ಕಾಂಗ್ರೆಸ್ 312, ಶಿವಸೇನಾ 295, ಎನ್‌ಸಿಪಿ 297 ಹಾಗೂ ಇತರ 453 ಸದಸ್ಯರು ಆಯ್ಕೆಯಾಗಿದ್ದಾರೆ.