ತ್ರಿವಳಿ ತಲಾಖ್ ನಿಷೇಧಕ್ಕೆ ಸುಪ್ರಿಂಕೋರ್ಟ್'ಗೆ ಪ್ರಮಾಣ ಪತ್ರ

ಗುರುವಾರ, 10 ನವೆಂಬರ್ 2016 (10:30 IST)
ನವದೆಹಲಿ: ಇತ್ತೀಚೆಗೆ ಭಾರಿ ಚರ್ಚೆಗೆ ಒಳಗಾದ ತ್ರಿವಳಿ ತಲಾಖ್ ಹಾಗೂ ಬಹುಪತ್ನಿತ್ವ ಪದ್ಧತಿ ನಿಷೇಧಿಸಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗ ಒತ್ತಾಯಿಸಿದೆ.
ಸುಪ್ರಿಂ ಕೋರ್ಟ್ ಗೆ ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಿರುವ ಆಯೋಗ, ಈ ಪದ್ಧತಿಗಳು ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ವಿರುದ್ಧವಾಗಿವೆ ಎಂದು ತಿಳಿಸಿದೆ. ತ್ರಿವಳಿ ತಲಾಖ್, ನಿಕಾಹ್ ಹಲಾಲಾ ಮತ್ತು ಬಹುಪತ್ನಿತ್ವ ಅಸಂವಿಧಾನಿಕವಾಗಿದ್ದು, ಮುಸ್ಲಿಂ ಮಹಿಳೆಯರು ಮತ್ತು ಅವರ ಮಕ್ಕಳ ಬದುಕಿಗೆ ಧಕ್ಕೆ ಮಾಡುತ್ತಿವೆ. ಹೀಗಾಗಿ ಇಂತಹ ಆಚರಣೆಗಳನ್ನು ನಿಷೇಧಿಸಬೇಕು ಎಂದು ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದೆ.
 
ಈ ಪದ್ಧತಿಯಿಂದ ಸಂಕಷ್ಟಕ್ಕೆ ಒಳಗಾದ ಹಲವು ಮಹಿಳೆಯರು ಆಯೋಗಕ್ಕೆ ದೂರು ಸಲ್ಲಿಸಿದ್ದರಿಂದ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ