ತ್ರಿವಳಿ ತಲಾಖೆ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಐತಿಹಾಸಿಕವಾದದ್ದು: ನರೇಂದ್ರಮೋದಿ

ಮಂಗಳವಾರ, 22 ಆಗಸ್ಟ್ 2017 (14:08 IST)
ತ್ರಿವಳಿ ತಲಾಖ್ ರದ್ದು ಮಾಡಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಐತಿಹಾಸಿಕವಾದದ್ದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ತೀರ್ಪಿನ ಕುರಿತಂತೆ ಟ್ವೀಟ್ ಮಾಡಿರುವ ನರೇಂದ್ರ ಮೋದಿ ಗೌರವಾನ್ವಿತ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದದ್ದು, ಈ ತೀರ್ಪು ಮುಸ್ಲಿಂ ಮಹಿಳೆಯರಿಗೆ ಸಮಾನತೆ ಕಲ್ಪಿಸಿದೆ. ಮಹಿಳಾ ಸಬಲೀಕರಣಕ್ಕೆ ಸುಪ್ರೀಂಕೋರ್ಟ್ ತೀರ್ಪು ಪ್ರಬಲ ಕ್ರಮವಾಗಿದೆ ಎಂದು ಹೇಳಿದ್ದಾರೆ.

ಸುದೀರ್ಘ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಇವತ್ತು ತೀರ್ಪು ಪ್ರಕಟಿಸಿತ್ತು. ತ್ರಿವಳಿ ತಲಾಖ್ ಅನ್ನ ರದ್ದು ಮಾಡಿದ ಸುಪ್ರೀಂಕೋರ್ಟ್ 6 ತಿಂಗಳೊಳಗೆ ತಲಾಖ್ ಅನ್ನ ಕಾನೂನು ವ್ಯಾಪ್ತಿಗೆ ತರುವಂತೆ ಕೇಂದ್ರಸರ್ಕಾರಕ್ಕೆ ಆದೇಶಿಸಿದೆ.   


Judgment of the Hon'ble SC on Triple Talaq is historic. It grants equality to Muslim women and is a powerful measure for women empowerment.

— Narendra Modi (@narendramodi) August 22, 2017

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ