ತ್ರಿಪುರಾ, ನ್ಯಾಗಲ್ಯಾಂಡ್ ಲ್ಲಿ ಬಿಜೆಪಿ, ಮೇಘಾಲಯದಲ್ಲಿ ಕಾಂಗ್ರೆಸ್ ಗೆ ಮುನ್ನಡೆ
ಶನಿವಾರ, 3 ಮಾರ್ಚ್ 2018 (09:47 IST)
ನವದೆಹಲಿ: ತ್ರಿಪುರಾ, ನ್ಯಾಗಾಲಾಂಡ್ ಮತ್ತು ಮೇಘಾಲಯ ವಿಧಾನಸಭಾ ಚುನವಾಣೆ ಮತ ಎಣಿಕೆ ಆರಂಭವಾಗಿದ್ದು, ಎರಡು ರಾಜ್ಯಗಳಲ್ಲಿ ಬಿಜೆಪಿ ಮಂದಿದ್ದು, ಒಂದರಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ತ್ರಿಪುರಾದಲ್ಲಿ ಬಿಜೆಪಿ ಮತ್ತು ಆಡಳಿತಾರೂಢ ಸಿಪಿಎಂ ನಡುವೆ ಪ್ರಬಲ ಪೈಪೋಟಿ ನಡೆದಿದೆ. ಇತ್ತೀಚೆಗಿನ ವರದಿ ಪ್ರಕಾರ ಸಿಪಿಎಂ 24 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ 22 ಸ್ಥಾನಗಳೊಂದಿಗೆ ಹಿಂಬಾಲಿಸುತ್ತಿದೆ.
ಮೇಘಾಲಯದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಒಟ್ಟು 60 ಸ್ಥಾನಗಳ ಪೈಕಿ ಕಾಂಗ್ರೆಸ್ 13 ರಲ್ಲಿ ಮುನ್ನಡೆಯಲ್ಲಿದ್ದರೆ, ಎನ್ ಪಿಪಿ 12 ಸ್ಥಾನಗಳೊಂದಿಗೆ ಪೈಪೋಟಿಯೊಡ್ಡಿದೆ. ಬಿಜೆಪಿ ಕೇವಲ 4 ಸ್ಥಾನಗಳಲ್ಲಿ ಮುನ್ನಡೆ ಹೊಂದಿದೆ.
ನ್ಯಾಗಾಲ್ಯಾಂಡ್ ನಲ್ಲಿ ಒಟ್ಟು 60 ಸ್ಥಾನಗಳ ಪೈಕಿ 17 ರಲ್ಲಿ ಬಿಜೆಪಿ 11 ಸ್ಥಾನಗಳಲ್ಲಿ ಎನ್ ಪಿಎಫ್ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಇನ್ನೂ ಯಾವುದೇ ಸ್ಥಾನ ಹೊಂದಿಲ್ಲ. ಅಂತೂ ಇತ್ತೀಗಿನ ವರದಿಯಂತೇ ಫಲಿತಾಂಶ ಬಂದರೆ ಮೂರೂ ರಾಜ್ಯಗಳಲ್ಲಿ ಅತಂತ್ರ ಸ್ಥಿತಿ ಗ್ಯಾರಂಟಿ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ