ಸತ್ಯ ಹೇಳಿದರೆ ನಾನೆಂದೂ ಕ್ಷಮೆಯಾಚಿಸುವುದಿಲ್ಲ- ರಾಹುಲ್ ಗಾಂಧಿ

ಭಾನುವಾರ, 15 ಡಿಸೆಂಬರ್ 2019 (06:33 IST)
ನವದೆಹಲಿ : ಸತ್ಯ ಹೇಳಿದರೆ ನಾನೆಂದೂ ಕ್ಷಮೆಯಾಚಿಸುವುದಿಲ್ಲ, ನನ್ನ ಹೆಸರು ರಾಹುಲ್ ಗಾಂಧಿಯೇ ಹೊರತು ರಾಹುಲ್ ಸಾವರ್ಕರ್ ಅಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.


ರಾಹುಲ್ ಗಾಂಧಿ ಅವರು ಭಾರತವನ್ನು ‘ರೇಪ್ ಇನ್ ಇಂಡಿಯಾ’ ಎಂದು ಕರೆದ ಹಿನ್ನಲೆಯಲ್ಲಿ ಆಡಳಿತ ಪಕ್ಷದವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ರಾಹುಲ್ ಗಾಂಧಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

 

ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಕ್ಷಮೆ ಕೇಳಬೇಕಿರುವುದು ನಾನಲ್ಲ. ದೇಶದ ಆರ್ಥಿಕತೆಯನ್ನುನಾಶಪಡಿಸುತ್ತಿರುವುದಕ್ಕೆ ಪ್ರಧಾನಿ ಮೋದಿ ಹಾಗೂ ಅವರ ಸಹಾಯಕ ಅಮಿತ್ ಶಾ ಕ್ಷಮೆಯಾಚಿಸಬೇಕು. ನಾನು ಸತ್ಯ ಹೇಳಿದ್ದೇನೆ. ಆದ್ದರಿಂದ ನಾನು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ