ಎರಡು ರಾಜಧಾನಿ ಎಕ್ಸ್‌ಪ್ರೆಸ್ ರೈಲುಗಳಿಗೆ ಬೆಂಕಿ

ಮಂಗಳವಾರ, 21 ಏಪ್ರಿಲ್ 2015 (15:07 IST)
ನಗರದ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎರಡು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿವೆ. ಆದರೆ, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಶುದ್ಧೀಕರಣ ಸ್ಥಳದಲ್ಲಿ ನಿಂತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ಎಸಿ ಕೋಚ್ ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಸಂಭವಿಸಿದೆ. ಬೆಂಕಿ ಕೆನ್ನಾಗಿಲಿದೆ ಪಕ್ಕದಲ್ಲಿ ನಿಂತಿದ್ದ ಮತ್ತೊಂದು ರೈಲಿಗೂ ತಾಕಿದೆ. ಇದರ ಪರಿಣಾಮ ಎರಡೂ ರೈಲುಗಳಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಘಟನೆಯಿಂದ ಈ ವರೆಗೂ ಯಾವುದೇ ಪ್ರಾಣಪಾಯವಾಗಿರುವ ಕುರಿತಂತೆ ವರದಿಯಾಗಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಬೆಂಕಿ ಅನಾಹುತಕ್ಕೆ ಆಗಿರುವ ಕಾರಣಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಸತ್ಯ ಹೊರಬೀಳಲಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ