ತಮಿಳುನಾಡಿನ ಸಚಿವರಾಗಿ ಉದಯನಿಧಿ ಪ್ರಮಾಣ ವಚನ ಸ್ವೀಕಾರ

ಬುಧವಾರ, 14 ಡಿಸೆಂಬರ್ 2022 (14:47 IST)
ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಹಿರಿಯ ಪುತ್ರ ಉದಯನಿಧಿ ಇಂದು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ತಮಿಳು ನಾಡಿನ ಡಿಎಂಕೆ ಸರ್ಕಾರ ಉದಯನಿಧಿ ಅವರನ್ನು ರಾಜ್ಯದ ನೂತನ ಕ್ರೀಡಾ ಸಚಿವರನ್ನಾಗಿ ನೇಮಿಸಲಾಗಿದೆ. ಉದಯನಿಧಿ ಸ್ಟಾಲಿನ್ ಅವರು ಚೆಪಾಕ್, ತಿರುವಲ್ಲಿಕೇಣಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ ಹಾಗೂ ಡಿಎಂಕೆ ಯುವ ವಿಭಾಗದ ಕಾರ್ಯದರ್ಶಿಯೂ ಆಗಿದ್ದಾರೆ.

ಉದಯನಿಧಿ ಅವರಿಗೆ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ರಾಜಭವನದಲ್ಲಿ ಪ್ರಮಾಣ ವಚನ ಬೋಧಿಸಿದರು. ಉದಯನಿಧಿ ಸ್ಟಾಲಿನ್ ಅವರನ್ನು 2019ರಲ್ಲಿ ಯುವ ವಿಭಾಗದ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

ಉದಯನಿಧಿ ಹಲವಾರು ತಮಿಳು ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ