ಉನಾ ಪ್ರಕರಣ: ಮೋದಿ, ಶಾ ವಿರುದ್ಧ ಹರಿಹಾಯ್ದ ಕಾಂಗ್ರೆಸ್

ಶುಕ್ರವಾರ, 5 ಆಗಸ್ಟ್ 2016 (16:16 IST)
ಗುಜರಾತಿನ ಉನಾದಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯವನ್ನು ಬೆಂಬಲಿಸಿ ಮಾತನಾಡಿದ್ದ ಹೈದರಾಬಾದ್‌ನ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಕ್ರಮ ಕೈಗೊಳ್ಳದಿರುವುದಕ್ಕೆ ಕಾಂಗ್ರೆಸ್ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಿಡಿಕಾರಿದೆ.


ರಾಜಾ ಸಿಂಗ್ ದಲಿತ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ. ಉನಾದಲ್ಲಿ ನಡೆದಿದ್ದು ಸರಿ. ತಮ್ಮ ಕೃತ್ಯವನ್ನು ಪುನರಾವರ್ತಿಸಿದರೆ ಇದೇ ಶಿಕ್ಷೆಗೊಳಗಾಗಬೇಕಾಗುತ್ತದೆ.  ಈ ಕುರಿತು ಪ್ರಧಾನಿ ಮತ್ತು ಅಮಿತ್ ಶಾ ಅವರಿಗೆ ಸಂಪೂರ್ಣ ಮಾಹಿತಿ ಇದೆ. ಆದರೆ ಯಾವ ಕ್ರಮಗಳನ್ನು ಕೈಗೊಂಡಿಲ್ಲ. ಬಿಜೆಪಿಯ ಉನ್ನತ ನಾಯಕರು ಸಿಂಗ್ ಹೇಳಿಕೆಯನ್ನು ಮೆಚ್ಚುತ್ತಾರೆ ಮತ್ತು ಇಂತಹ ಹೇಳಿಕೆಗಳನ್ನು ನೀಡಲು ಉತ್ತೇಜಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ, ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಪಿ.ಎಲ್ ಪುನಿಯ ಆರೋಪಿಸಿದ್ದಾರೆ.

ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗವು ಕೂಡ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಇದೀಗ ಅವರ ಮೇಲೆ ಪ್ರಕರಣ ದಾಖಲಾದ ಮಾಹಿತಿ ಲಭಿಸಿದೆ. ಕಾನೂನು ತನ್ನ ಕೆಲಸವನ್ನು ಮಾಡುತ್ತದೆ. ಆದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಬಿಜೆಪಿಯ ನೈತಿಕ ಮತ್ತು ರಾಜಕೀಯ ಜವಾಬ್ದಾರಿ ಎಂದು ಕಾಂಗ್ರೆಸ್ ಹೇಳಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ