ಮುಂಬೈ : ಕನ್ನಡಿಗರ ಸ್ವಾಭಿಮಾನ, ಅಸ್ಮಿತೆಯನ್ನು ಮಹಾರಾಷ್ಟ್ರ ರಾಜಕಾರಣಿಗಳು ಕೆಣಕಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆದಾಗಲೆಲ್ಲಾ ಗಡಿ ವಿಚಾರವನ್ನು ಕೆದಕುವುದು ಪುಂಡ ಮರಾಠಿಗರ ಕಾಯಕವಾಗಿಬಿಟ್ಟಿದೆ.
ಕಳೆದ 20 ದಿನಗಳಿಂದ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಬೂದಿಮುಚ್ಚಿದ ವಾತಾವರಣ ನಿರ್ಮಾಣವಾಗಿದೆ. ಗಡಿ ಪ್ರಕರಣ ಸುಪ್ರೀಂಕೋರ್ಟ್ನಲ್ಲಿದೆ. ಆದರೂ ಹಿಂದಿನ ಉದ್ಧವ್ ಠಾಕ್ರೆ ಸರ್ಕಾರ ಮತ್ತು ಇಂದಿನ ಏಕನಾಥ್ ಶಿಂಧೆ ಸರ್ಕಾರ ಮತ್ತೆ ಕನ್ನಡಿಗರನ್ನು ಕೆಣಕಿದೆ.
ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಆಡಳಿತದಲ್ಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡೂ ರಾಜ್ಯಗಳ 6 ಜನರ ಸಮಿತಿ ರಚಿಸಿ ಸದ್ಯದ ವಿವಾದ ತಣ್ಣಗಾಗಿಸುವಂತೆ ಸೂಚಿಸಿದ್ದರು.
ಅದರೂ ʼಬೆಳಗಾವಿ ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ಸೋಮವಾರ ಮಾಜಿ ಸಿಎಂ ಉದ್ಧವ್ ಠಾಕ್ರೆ ಕೂಗೆಬ್ಬಿಸಿದ್ದರು. ಇವತ್ತು ಮಹಾರಾಷ್ಟ್ರ್ರ ಸಿಎಂ ಏಕನಾಥ್ ಶಿಂಧೆ ನಿರ್ಣಯ ಮಂಡಿಸಿದ್ದಾರೆ.