ಪಶ್ಚಿಮ ಬಂಗಾಳದಲ್ಲಿ ಅಘೋಷಿತ ತುರ್ತುಪರಿಸ್ಥಿತಿ: ಬಿಜೆಪಿ ಆರೋಪ

ಶನಿವಾರ, 27 ಜೂನ್ 2015 (16:53 IST)
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಅಘೋಷಿುತ ತುರ್ತುಪರಿಸ್ಥಿತಿ ಜಾರಿಗೆ ಬಂದಿದೆ ಎಂದು ಬಿಜೆಪಿ ಆರೋಪಿಸಿದೆ.
 
40ನೇ ತುರ್ತುಪರಿಸ್ಥಿತಿ ವರ್ಷಾಚರಣೆ ಅಂಗವಾಗಿ ಭಾಷಣ ಮಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರು ಸರ್ವಾಧಿಕಾರಿ ಧೋರಣೆಯನ್ನು ನಿಲ್ಲಿಸದಿದ್ದಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
 
ಬಂಗಾಳದ ಅಘೋಷಿತ ತುರ್ತುಪರಿಸ್ಥಿತಿಯಿದೆ, ಹಿಂಸಾಚಾರವಿದೆ. ವಿಪಕ್ಷಗಳಿಗೆ ತಮ್ಮ ನಿಲುವುಗಳನ್ನು ಮಂಡಿಸಲು ಅವಕಾಶ ದೊರೆಯುತ್ತಿಲ್ಲ. ವಿಪಕ್ಷ ನಾಯಕರುಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಅಧಿಕಾರದ ನಶೆ ತಲೆಗೆ ಏರಿದ ನಾಯಕರು ನಾಶವಾಗುತ್ತಾರೆ ಎಂದು ಜಾವ್ಡೇಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.  
 
ಒಂದು ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ ಹಿಂಸಾಚಾರದ ದಾರಿಯನ್ನು ತುಳಿದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಂತೆ ಧೂಳಿಪಟವಾಗುವುದರಲ್ಲಿ ಸಂದೇಹವಿಲ್ಲ ಎಂದರು.
 
ತುರ್ತುಪರಿಸ್ಥಿತಿಯನ್ನು ಹೇರಿ ಪ್ರಜಾಪ್ರಭುತ್ವವನ್ನು ಕೊಂಡ ಕಾಂಗ್ರೆಸ್ ಪಕ್ಷಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ನೆಲಸಮಗೊಂಡಿದೆ ಎಂದು ಬಿಜೆಪಿ ನಾಯಕ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.  
 

ವೆಬ್ದುನಿಯಾವನ್ನು ಓದಿ