ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ಮಂಗಳವಾರ, 19 ಸೆಪ್ಟಂಬರ್ 2023 (09:03 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ದೊರೆತಿದೆ ಎಂದು ಮೂಲಗಳು ತಿಳಿಸಿವೆ.

ನಾಳೆ (ಮಂಗಳವಾರ) ಹೊಸ ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಭಾನುವಾರ (ಸೆ.17) ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮಸೂದೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದವು. ವಿಶೇಷ ಅಧಿವೇಶನದಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.

ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, “ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ತಿಳಿಸಿದ್ದರು.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಸಂಸತ್ನ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ