ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ

Krishnaveni K

ಗುರುವಾರ, 27 ಫೆಬ್ರವರಿ 2025 (10:31 IST)
ನವದೆಹಲಿ: ಜಂಟಿ ಸಂಸದೀಯ ಸಮಿತಿ ನೀಡಿದ್ದ ವರದಿ ಮೇರೆಗೆ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

ಫೆಬ್ರವರಿ 13 ರಂದು ಜಂಟಿ ಸಂಸದೀಯ ಸಮಿತಿ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿತ್ತು. ಇದನ್ನು ಈಗ ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ. ಸಂಸತ್ ನಲ್ಲಿ ಮಸೂದೆ ಮಂಡಿಸುವಾಗ ವಿಪಕ್ಷಗಳು ಸಭಾತ್ಯಾಗ ನಡೆಸಿ ತಮ್ಮ ವಿರೋಧ ಸೂಚಿಸಿದ್ದವು.

ಕಳೆದ ವಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿತ್ತು. ಈಗ ತಿದ್ದುಪಡಿ ಮಾಡಲಾದ ಕಾಯಿದೆ ಪ್ರಕಾರ ವಕ್ಫ್ ಆಸ್ತಿ ನೋಂದಣಿಯನ್ನು ಇನ್ನಷ್ಟು ಸುಗಮಗೊಳಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.

ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ನೇತೃತ್ವದ ಸಮಿತಿ ಈಗ ಇರುವ ವಕ್ಫ್ ಕಾನೂನಿಗೆ ಕೆಲವೊಂದು ತಿದ್ದುಪಡಿ ಸೂಚಿಸಿದೆ. ಅದನ್ನು ಈಗ ಕೇಂದ್ರ ಸಂಪುಟ ಅಂಗೀಕರಿಸಿದೆ. ಈ ಮೂಲಕ ವಕ್ಫ್ ತಿದ್ದುಪಡಿ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಂತಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ