ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ರೆ ನಂಗೇನೂ ಆಗಲ್ಲ ಎಂದ ಕೇಂದ್ರ ಸಚಿವ

ಭಾನುವಾರ, 16 ಸೆಪ್ಟಂಬರ್ 2018 (10:57 IST)
ನವದೆಹಲಿ: ದೇಶದಲ್ಲಿ ದಿನೇ ದಿನೇ ತೈಲ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ರಾಮ್ ದಾಸ್ ಅಥವಾಲೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

‘ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ್ರೂ ನಾನು ಸಚಿವನಾಗಿರುವುದರಿಂದ ನನ್ನ ಮೇಲೆ ಏನೂ ಪರಿಣಾಮವಾಗಲ್ಲ. ನನಗೆ ಇದರಿಂದ ಯಾವುದೇ ನಷ್ಟವಿಲ್ಲ. ಒಂದು ವೇಳೆ ನನ್ನ ಸಚಿವ ಸ್ಥಾನ ಹೋದರೆ ನನಗೆ ನಷ್ಟವಾಗಬಹುದು’ ಎಂದು ರಾಮದಾಸ್ ಹಗುರವಾಗಿ ಹೇಳಿ ವಿವಾದ ಸೃಷ್ಟಿಸಿದ್ದಾರೆ.

ಹಾಗಿದ್ದರೆ ಜನ ಸಾಮಾನ್ಯರು ಕಷ್ಟ ಅನುಭವಿಸುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ಹೌದು ಜನಸಾಮಾನ್ಯರ ಹೊರೆಯನ್ನು ತಗ್ಗಿಸುವುದು ಸರ್ಕಾರದ ಕೆಲಸ. ರಾಜ್ಯ ಸರ್ಕಾರಗಳು ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಬಹುದು’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ