ಕೇಂದ್ರ ಸಚಿವ ಕಿರಣ್ ರಿಜಿಜು ಕಾರು ಅಪಘಾತ

ಭಾನುವಾರ, 9 ಏಪ್ರಿಲ್ 2023 (10:14 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ಪ್ರದೇಶದಲ್ಲಿ ಕಾನೂನು ಸಚಿವ ಕಿರಣ್ ರಿಜಿಜು ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಸಣ್ಣ ಮಟ್ಟದ ಅಪಘಾತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.
 
ಶನಿವಾರ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮಬಾನ್ನಲ್ಲಿ ಕೇಂದ್ರ ಸಚಿವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ಎಡಿಜಿ ಮುಖೇಶ್ ಸಿಂಗ್ ತಿಳಿಸಿದ್ದಾರೆ.

ಈ ಪ್ರಯಾಣಕ್ಕೂ ಹಿಂದಿನ ದಿನ ಕಾನೂನು ಸೇವಾ ಶಿಬಿರದಲ್ಲಿ ಪಾಲ್ಗೊಳ್ಳಲು ಜಮ್ಮುವಿನಿಂದ ಉಧಮ್ಪುರಕ್ಕೆ ಪ್ರಯಾಣಿಸುತ್ತಿದ್ದಾಗ ಸಚಿವರು, “ಪ್ರಯಾಣದ ಉದ್ದಕ್ಕೂ ಸುಂದರವಾದ ರಸ್ತೆಯನ್ನು ಆನಂದಿಸಬಹುದು” ಎಂದು ಟ್ವೀಟ್ ಮಾಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ