ಕೇಂದ್ರ ಸರ್ಕಾರದ ಸಚಿವರು ಕೂಡ ಸುಪ್ರೀಂಕೋರ್ಟಿನ ನ್ಯಾಯಾಧೀಶರಂತೆ ಪ್ರಜಾಪ್ರಭುತ್ವದ ಬಗ್ಗೆ ಧ್ವನಿ ಎತ್ತಬೇಕು ಎಂದು ಬಿಜೆಪಿ ಮುಖಂಡ ಯಶವಂತ ಸಿನ್ಹಾ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನ್ಯಾಯಾಧೀಶರಂತೆ ಕೇಂದ್ರ ಸಚಿವರು ಕೂಡ ಧೈರ್ಯವಾಗಿ ಮಾತನಾಡಬೇಕು ಎಂದಿದ್ದಾರೆ.
ನ್ಯಾಯಾಧೀಶರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕರು ಮಾತನಾಡಬೇಕು. ಆದ್ದರಿಂದ ಕೇಂದ್ರ ಸಚಿವರು ಭಯದಿಂದ ಹೊರಬಂದು ಮಾತನಾಡಬೇಕು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.