ಉನ್ನಾವೋ ಸಂತ್ರಸ್ತೆಯ ಕುಟುಂಬಕ್ಕೆ ಈಗ ಸಾಲು ಸಾಲು ನೆರವು

ಸೋಮವಾರ, 9 ಡಿಸೆಂಬರ್ 2019 (09:31 IST)
ನವದೆಹಲಿ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಪೊಲೀಸ್ ಭದ್ರತೆ ಹಾಗೂ ಪರವಾನಗಿ ಸಹಿತ ಆಯುಧ ಇಟ್ಟುಕೊಳ್ಳಲು ಅನುಮತಿ ನೀಡುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಭರವಸೆ ನೀಡಿದ್ದಾರೆ.


ಉನ್ನಾವೋ ಸಂತ್ರಸ್ತೆಯ ಕುಟುಂಬ ವರ್ಗದವರನ್ನು ಭೇಟಿಯಾದ ಲಕ್ನೋ ಪೊಲೀಸ್ ಆಯುಕ್ತ ಮುಖೇಶ್ ಮೆಶ್ರಾಮ್ ಭೇಟಿಯಾಗಿ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.

ಆರೋಪಿಗಳ ಕಡೆಯವರಿಂದ ಮತ್ತೆ ತೊಂದರೆಯಾಗದಂತೆ ಸಂತ್ರಸ್ತೆಯ ಸಹೋದರಿ ಮತ್ತು ಇತರ ಕುಟುಂಬ ಸದಸ್ಯರಿಗೆ ಭದ್ರತೆ ಒದಗಿಸಿರುವುದಾಗಿ ಆಯುಕ್ತರು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಪರವಾನಗಿ ಸಹಿತ ಆಯುಧ ಒದಗಿಸುವುದಾಗಿ ಹೇಳಿದ್ದಾರೆ. ಇದಲ್ಲದೆ ಸಂತ್ರಸ್ತೆಯ ಕುಟುಂಬದವರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಒದಗಿಸಲಾಗುವುದು ಎಂದೂ ಹೇಳಿದ್ದಾರೆ. ಇದಲ್ಲದೆ, ಸಿಎಂ ಸಂತ್ರಸ್ತೆಯ ಕುಟುಂಬಕ್ಕೆ ಪರಿಹಾರ ರೂಪದಲ್ಲಿ 25 ಲಕ್ಷ ರೂ.ಗಳನ್ನೂ ಘೋಷಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ