ಇಂದಿನಿಂದ ಗೋವಾದಲ್ಲಿ ಬ್ರಿಕ್ಸ್ ಸಮ್ಮೇಳನ

ಶನಿವಾರ, 15 ಅಕ್ಟೋಬರ್ 2016 (11:02 IST)
ಇಂದಿನಿಂದ ಗೋವಾದ ರಾಜಧಾನಿ ಪಣಜಿಯಲ್ಲಿ ಐದು ರಾಷ್ಟ್ರಗಳನ್ನೊಳಗೊಂಡ ಬ್ರಿಕ್ಸ್ ಸಮಾವೇಶ ಆರಂಭವಾಗಲಿದ್ದು, ಸಮಾವೇಶದಲ್ಲಿ ಭಾರತ, ಪಾಕ್ ಪ್ರೇರಿತ ಭಯೋತ್ಪಾದನೆ ಬಗ್ಗೆ ಜಾಗತಿಕ ರಾಷ್ಟ್ರಗಳ ಗಮನ ಸೆಳೆಯೋ ಪ್ರಯತ್ನ ನಡೆಸಲಿದೆ. 
ಪಣಜಿಯ ಕಡಲ ಕಿನಾರೆಯಲ್ಲಿರುವ ಲೀಲಾ ಹೊಟೆಲ್‌ನಲ್ಲಿ ಸಮಾವೇಶ ನಡೆಯಲಿದ್ದು, ಇದು ಭಾರತದಲ್ಲಿ ನಡೆಯುತ್ತಿರುವ ಪ್ರಥಮ ಬ್ರಿಕ್ಸ್ ಸಮ್ಮೇಳನವೆನಿಸಿದೆ. 
 
8ನೇ ಬ್ರಿಕ್ಸ್ ಸಮಾವೇಶದಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಆಫ್ರಿಕಾ ದೇಶಗಳು ಪಾಲ್ಗೊಳ್ಳುತ್ತಿದ್ದು, 
ರಾಜತಾಂತ್ರಿಕ ಸಂಬಂಧ ವೃತ್ತಿ, ವ್ಯಾಪಾರ ಹಾಗೂ ಹೂಡಿಕೆಯಲ್ಲಿ ಹೆಚ್ಚಳ ಮತ್ತು ಭಯೋತ್ಪಾದನೆ ಸೇರಿದಂತೆ ಅನೇಕ ವಿಷಯಗಳು ಚರ್ಚೆಯಾಗುವ ಸಾಧ್ಯತೆಗಳಿವೆ
 
ಚೀನಾ ಮತ್ತು ರಷ್ಯಾ ಮುಖಂಡರ ಜತೆ ಪ್ರಧಾನಿ ಮೋದಿ ಪ್ರತ್ಯೇಕ ಮಾತುಕತೆಯನ್ನು ಸಹ ನಡೆಸಲಿದ್ದಾಕೆ.  ಪುಟಿನ್ ಜತೆ 60,000 ಕೋಟಿ ರೂಪಾಯಿಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.
 
ಉಗ್ರ ದಾಳಿ ಭೀತಿ ಹಿನ್ನೆಲೆಯಲ್ಲಿ ಬ್ರಿಕ್ಸ್ ಸಮ್ಮೇಳನಕ್ಕೆ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. 
 
ಏತನ್ಮಧ್ಯೆ ಗೋವಾ ಕಡೆ ಹೊರಟಿದ್ದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ವಿಶೇಷ ವಿಮಾನ ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿ ಮತ್ತೆ ಗೋವಾ ಕಡೆ ಪ್ರಯಾಣ ಬೆಳೆಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ವೆಬ್ದುನಿಯಾವನ್ನು ಓದಿ