ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದು ಮಾತ್ರವಲ್ಲದೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಕ್ಕಾಗಿ ಅಲ್ಲಿನ ಸ್ಥಳೀಯ ಬಿಜೆಪಿ ಮುಖಂಡ ಮತ್ತು ಐವರು ಕಾರ್ಯಕರ್ತರನ್ನು ಶ್ರೇಷ್ಠಾ ಜೈಲಿಗಟ್ಟಿದ್ದರು.ಈ ಪ್ರಕರಣ ನಡೆದ ಒಂದೇ ವಾರದಲ್ಲಿ ಶ್ರೇಷ್ಠಾ ಅವರು ಸೇರಿದಂತೆ ಅವರ ಹಲವು ಸಹೋದ್ಯೋಗಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಉತ್ತರ ಪ್ರದೇಶದ ಬಹರೈಚ್ ಗೆ ಶ್ರೇಷ್ಠಾ ಅವರನ್ನು ಎತ್ತಂಗಡಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಶ್ರೇಷ್ಠಾ ಅವರು ದಂಡ ವಿಧಿಸಿದ್ದ ಪ್ರಕರಣದ ಬಗ್ಗೆ ಬಿಜೆಪಿಯ 11 ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಅವರಿಗೆ ದೂರು ನೀಡಿದ್ದರು. ಅಲ್ಲದೇ ಬಿಜೆಪಿ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡ ಪೊಲೀಸ್ ಅಧಿಕಾರಿಯನ್ನು ಎತ್ತಂಗಡಿ ಮಾಡಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಶ್ರೇಷ್ಠಾ ಅವರು ಸಿಎಂ ಆದಿತ್ಯನಾಥ್ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದರಿಂದ ವರ್ಗಾವಣೆ ಮಾಡಲಾಗಿದೆ ಎಂಬುದು ಕೆಲ ಬಿಜೆಪಿ ನಾಯಕರ ವಾದ.