ಉತ್ತರಪ್ರದೇಶ: ಚಲಿಸುತ್ತಿರುವ ವಾಹನದಲ್ಲಿಯೇ ಮಹಿಳೆಯ ಮೇಲೆ ಗ್ಯಾಂಗ್‌ರೇಪ್

ಬುಧವಾರ, 7 ಜೂನ್ 2017 (18:13 IST)
ಆಘಾತಕಾರಿ ಘಟನೆಯೊಂದರಲ್ಲಿ ಚಲಿಸುತ್ತಿರುವ ವಾಹನದಲ್ಲಿಯೇ ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ದಾರುಣ ಕೃತ್ಯ ಉನ್ನಾವೋ ಜಿಲ್ಲೆಯಲ್ಲಿ ನಡೆದಿದೆ.
 
ಮಹಿಳೆಯ ಮೇಲೆ ಮೂವರು ಕಾಮುಕರು ಗ್ಯಾಂಗ್‌ರೇಪ್ ಎಸಗಿ, ಪ್ರಜ್ಞೆ ಕಳೆದುಕೊಂಡ ಮಹಿಳೆಯನ್ನು ರಸ್ತೆಯ ಮೇಲೆ ಎಸೆದು ಪರಾರಿಯಾಗಿದ್ದಾರೆ.
 
ಮಹಿಳೆ ಪ್ರಜ್ಞೆಗೆ ಮರಳಿದ ನಂತರ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ. ದೂರನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.
 
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೆಲ ದಿನಗಳ ಹಿಂದೆ ಹಿರಿಯ ಪೊಲೀಸ್ ಅಧಿಕಾರಿಗಳ ಪರೀಶಿಲನಾ ಸಭೆ ನಡೆಸಿ, ನಿರ್ಲಕ್ಷತೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿರುವುದನ್ನು ಸ್ಮರಿಸಬಹುದು.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ