ಟಿಕೆಟ್ ಅಸಮಾಧಾನ: ಸಚಿವೆ ಸ್ಮೃತಿ ಇರಾನಿ ಪ್ರತಿಕೃತಿ ದಹಿಸಿದ ಬಿಜೆಪಿ ಕಾರ್ಯಕರ್ತರು

ಗುರುವಾರ, 26 ಜನವರಿ 2017 (14:05 IST)
ಮುಂಬರುವ ವಿಧಾನಸಭೆ ಚುನಾವಣೆಗಾಗಿ ಟಿಕೆಟ್ ತಾರತಮ್ಯ ತೋರಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸ್ಮೃತಿ ಇರಾನಿಯವರ ಸಂಚಿನಿಂದಲೇ ಗೌರಿಗಂಜ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಮಾ ಶಂಕರ್ ಪಾಂಡೆಗೆ ಟಿಕೆಟ್ ದೊರೆತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕಳೆದ 2014ರ ಲೋಕಸಭೆ ಚುನಾವಣೆಯಲ್ಲಿ ಇರಾನಿಯವರ ಚುನಾವಣೆ ಏಜೆಂಟ್‌ರಾಗಿದ್ದ ಪಾಂಡೆ ಮಾತನಾಡಿ, ಪಕ್ಷದ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
 
ಇದಕ್ಕಿಂತ ಮೊದಲು ಉಮಾಶಂಕರ್ ಪಾಂಡೆ ನಾಮಪತ್ರವನ್ನು ವಾಪಸ್ ಪಡೆಯದಿದ್ದಲ್ಲಿ ನೂರಕ್ಕೂ ಹೆಚ್ಚು ಬೂತ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಕಾರ್ಯಕರ್ತರು ಗುಡುಗಿದ್ದಾರೆ.
 
ಏತನ್ಮಧ್ಯೆ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆಶೀಷ್ ಶುಕ್ಲಾ ತಮ್ಮ ಬೆಂಬಲಿಗರಿಗೆ ಕರೆ ನೀಡಿ, ಫೆಬ್ರವರಿ 1 ರಂದು ತೆಗೆದುಕೊಳ್ಳುವ ನಿರ್ಧಾರಕ್ಕೆ ಸಿದ್ದರಾಗಿ ಎಂದು ಕರೆ ನೀಡಿದ್ದಾರೆ. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ