ಪಾಕಿಸ್ತಾನವನ್ನು ಭೂಪುಟದಿಂದಲೇ ಅಳಿಸಿಹಾಕಬೇಕು: ಗೃಹ ಸಚಿವ

ಭಾನುವಾರ, 18 ಸೆಪ್ಟಂಬರ್ 2016 (15:51 IST)
ಉತ್ತರ ಕಾಶ್ಮಿರದ ಉರಿ ಪಟ್ಟಣದಲ್ಲಿರುವ ಸೇನಾ ಕಚೇರಿ ಮೇಲೆ ದಾಳಿ ನಡೆಸಿದ ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡಿ ಭಾರತದ ವಿರುದ್ಧ ಪರೋಕ್ಷ ಯುದ್ಧ ಸಾರುತ್ತಿದೆ. ಇದೊಂದು ಉಗ್ರರ ರಾಷ್ಟ್ರ. ಪಾಕಿಸ್ತಾನವನ್ನು ಭೂಪುಟದಿಂದಲೇ ಅಳಿಸಿಹಾಕಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದಾರೆ.
 
ಪಾಕಿಸ್ತಾನ ನಿರಂತರವಾಗಿ ಉಗ್ರರಿಗೆ ಮತ್ತು ಉಗ್ರ ಸಂಘಟನೆಗಳಿಗೆ ನೇರ ಬೆಂಬಲ ನೀಡುತ್ತಿರುವುದರಿಂದ ತುಂಬಾ ನಿರಾಶೆಯಾಗಿದೆ. ಇಂತಹ ರಾಷ್ಟ್ರವನ್ನು ಅಳಿಸಿಹಾಕಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ರಾಜನಾಥ್ ಸಿಂಗ್ ಉಪಸ್ಥಿತರಿದ್ದ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಐಬಿ ಮುಖ್ಯಸ್ಥ ದಿನೇಶ್ವರ್ ಶರ್ಮಾ, ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್, ರಕ್ಷಣಾ ಕಾರ್ಯದರ್ಶಿ ಜಿ.ಮೋಹನ್ ಕುಮಾರ್, ಸಿಆರ್‌ಪಿಎಫ್ ಡಿಜಿ ದುರ್ಗಾ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.  
 
ಉರಿ ಸೇನಾ ಕಚೇರಿ ಮೇಲೆ ದಾಳಿ ನಡೆಸಿದ ಉಗ್ರರು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಲ್ಲದೇ ಸೇನಾ ತರಬೇತಿ ಪಡೆದಿದ್ದಾರೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ