ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಅಮೆರಿಕ ಖಂಡನೆ

ಬುಧವಾರ, 6 ಸೆಪ್ಟಂಬರ್ 2017 (15:55 IST)
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಗ್ಗೆ ವಿಶ್ವಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಅಮೆರಿಕ ರಾಯಭಾರ ಕಚೇರಿ ಸಹ  ಈ ಹೀನ ಕೃತ್ಯವನ್ನ ಖಂಡಿಸಿದ್ದು, ಸಂತಾಪ ಸೂಚಿಸಿದೆ.  

ಬೆಂಗಳೂರಿನಲ್ಲಿ ನಡೆದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹತ್ಯೆಯನ್ನು ಖಂಡಿಸುವಲ್ಲಿ ಅಮೆರಿಕ ರಾಯಭಾರ ಕಚೇರಿಯು ಭಾರತ ಮತ್ತು ವಿಶ್ವಾದ್ಯಂತ ಇರುವ ಮಾಧ್ಯಮ ಸ್ವಾತಂತ್ರ್ಯ ಪ್ರತಿಪಾದಕರ ಜತೆಗೂಡುತ್ತದೆ. ಗೌರಿ ಲಂಕೇಶ್‌ ಅವರ ಕುಟುಂಬ, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ಸಂತಾಪ ಸೂಚಿಸುತ್ತೇವೆ ಎಂದು ಚೆನ್ನೈನ ರಾಯಭಾರ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ನಿನ್ನೆ ಸಂಜೆ 7.45ರ ಸುಮಾರಿಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಕ್ಕೆ ಕಾರಿನಲ್ಲಿ ಆಗಮಿಸಿದ ಗೌರಿ ಲಂಕೇಶ್ ಮೇಲೆ ದಾಳಿ ನಡೆಸಿದ್ದ ದುಷ್ಕರ್ಮಿಯೊಬ್ಬ ಪಿಸ್ತೂಲ್`ನಿಂದ ಏಕಾಏಕಿ ಗುಂಡಿನ ದಾಳಿ ನಡೆಸಿ ಕೊಂದಿದ್ದಾನೆ. 7 ಸುತ್ತು ಗುಂಡು ಹಾರಿಸಲಾಗಿತ್ತು. 3 ಗುಂಡು ಗೌರಿ ಲಂಕೇಶ್ ದೇಹ ಸೀಳಿದ್ದವು. ಗೌರಿ ಕುಸಿದು ಬಿದ್ದ ಬಳಿಕವೂ ಎದೆಗೆ ಗುಂಡು ಹೊಡೆಯಲಾಗಿದೆ. ಸಿಸಿಟಿವಿ, ಮೊಬೈಲ್ ಮಾಹಿತಿ ಆಧರಿಸಿ ಎಸ್ಐಟಿ ತನಿಖೆಗೆ ಕರ್ನಾಟಕ ಸರ್ಕಾರ ಆದೇಶಿಸಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ