ಜಿ20 ಶೃಂಗಸಭೆಗೆ ಅಮೆರಿಕ ಅಧ್ಯಕ್ಷರ ಪ್ರವಾಸ

ಮಂಗಳವಾರ, 5 ಸೆಪ್ಟಂಬರ್ 2023 (13:03 IST)
ನವದೆಹಲಿ : ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಪತ್ನಿ ಜಿಲ್ ಬೈಡನ್ (72) ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರಿಗೆ ಸಾಮಾನ್ಯ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಶ್ವೇತಭವನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಅನಾರೋಗ್ಯದ ಹಿನ್ನಲೆ ಸೋಮವಾರ ಸಂಜೆ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಬಗ್ಗೆ ಅವರ ಮಾಧ್ಯಮ ಸಲಹೆಗಾರರಾದ ಎಲಿಜಬೆತ್ ಅಲೆಕ್ಸಾಂಡರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸದ್ಯ ಜಿಲ್ ಬೈಡನ್ ಅವರು ಡೆಲವೇರ್ನ ರೆಹೋಬೋತ್ ಬೀಚ್ನಲ್ಲಿರುವ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಅವರಿಗೆ ಕಳೆದ ವರ್ಷ ಆಗಸ್ಟ್ನಲ್ಲೂ ಕೋವಿಡ್ ಸೋಂಕು ಪತ್ತೆಯಾಗಿತ್ತು.

ಜಿಲ್ ಬೈಡನ್ಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಅಧ್ಯಕ್ಷ ಬೈಡನ್ ಅವರಿಗೆ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಶ್ವೇತಭವನ ತಿಳಿಸಿದೆ. ಪರೀಕ್ಷೆಯಲ್ಲಿ ಅಧ್ಯಕ್ಷರಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದೆ. ಅಧ್ಯಕ್ಷರನ್ನು ಈ ವಾರ ನಿಯಮಿತವಾಗಿ ಪರೀಕ್ಷಿಸಲಾಗುತ್ತದೆ. ಈ ವೇಳೆ ರೋಗಲಕ್ಷಣಗಳ ಮೇಲ್ವಿಚಾರಣೆ ಮಾಡಲಾಗುತ್ತದೆ.

ಸದ್ಯ ಅವರು ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅದಕ್ಕಾಗಿ ಸೆ.7 ರಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಸೆ.8 ರಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, 9 ಹಾಗೂ 10 ರಂದು ನಡೆಯಲಿರುವ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ